ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಕ್ಟೋಬರ್.9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೈತರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಅಕ್ಟೋಬರ್.9ರವರೆಗೂ ಕರಾವಳಿಯ ಕೆಲ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಮಂಡ್ಯ, ಮೈಸೂರು, ಕೊಡಗು, ಹಾಸನ ಹಾಗೂ ಚಾಮರಾಜನಗರದಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.