ರಾಜ್ಯ

ಗಂಗಾರತಿ ಒಪ್ಪುವವರು ಕಾವೇರಿ ಆರತಿಗೇಕೆ ವಿರೋಧ : ಬಿಜೆಪಿಗೆ ಶಾಸಕ ರವಿಕುಮಾರ್ ಗಣಿಗ ತಿರುಗೇಟು

ಬೆಂಗಳೂರು : ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಗಂಗಾ ಆರತಿ ಬೇಕು ಎಂದಿದ್ದಾರೆ. ಕರ್ನಾಟಕದಲ್ಲಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಾರೆ. ಅವರಿಗೆ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದಷ್ಟೇ ಮುಖ್ಯ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲ ಶಾಸಕರ ಅಸಮಾಧಾನದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಚರ್ಚಿಸಿ ಬಗೆಹರಿಸುತ್ತಾರೆ. ಆರೇಳು ಬಾರಿ ಗೆದ್ದ ಹಿರಿಯ ಶಾಸಕರು ಕಾಂಗ್ರೆಸ್‌ನಲ್ಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಚರ್ಚೆ ಮಾಡಲು ಅವಕಾಶ ಇದೆ. ಅದನ್ನು ಬಿಟ್ಟು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ವಸತಿ ಯೋಜನೆಗಳಲ್ಲಿ ಬಡವರಿಂದ ಹಣ ಪಡೆಯುವ ದಾರಿದ್ರ್ಯ ಜಮೀರ್ ಅಹಮದ್ ಖಾನ್ ಅವರಿಗಿಲ್ಲ. ಸಾಕಷ್ಟು ದಾನ ಧರ್ಮ ಮಾಡಿ ಹೆಸರುವಾಸಿಯಾಗಿರುವ ಜಮೀರ್ ವಸತಿ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ.2022ರಲ್ಲಿ ಮನೆ ಮಂಜೂರಾತಿ ಪಡೆದಿದ್ದವರಿಗೆ ಈಗ ಸ್ವಾಽನ ಪತ್ರ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಆದಿಯಾಗಿ ಎಲ್ಲರೂ ಸೇರಿಯೇ ಶಾಸಕರಿಗೆ ಅನುದಾನ ನೀಡುತ್ತಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರ ಅನುಮತಿಯೂ ಅಗತ್ಯವಿದೆ ಎಂದು ಹೇಳಿದ ಗಣಿಗ ರವಿ, ಅನುದಾನ ಬೇಕಿದ್ದರೆ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲಿ ಎಂದು ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

2 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 hours ago