ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗೆ ಶೂನ್ಯ ಅಂಕ ನೀಡುವವರಿಗೆ ಓದುವಂತಹ ಬುದ್ಧಿ ಇರಬೇಕು. ಇಲ್ಲವೇ ಕಡೆ ಪಕ್ಷ ಓದುವಂತವರನ್ನಾದರೂ ಜೊತೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ ವರ್ಷಗಳಲ್ಲಿ ಭಾರತ 3ನೇ ಆರ್ಥಿಕ ಶಕ್ತಿಯಾಗಿ ರೂಪುಗೊಳ್ಳಲಿದೆ. 2047ಕ್ಕೆ ವಿಕಸಿತ ಭಾರತವಾಗಿ ರೂಪುಗೊಳ್ಳಲು ನಮ್ಮ ಎಲ್ಲಾ ರೋಡ್ ಮ್ಯಾಪ್‍ಗಳು ಸಿದ್ಧವಾಗಿವೆ ಎಂದು ಹೇಳಿದರು.
ಆಪರೇಷನ್ ಸಿಂಧೂರ ವಿಚಾರದಲ್ಲಿ ಪಾಕಿಸ್ತಾನದ ವರ್ಷನ್ ಮಾತನಾಡುವವರಿಗೆ ನಾನು ಉತ್ತರ ಕೊಡುವುದಿಲ್ಲ. ಅವರ ವಾಯುನೆಲೆ ನಾಶವಾಗಿವೆ ಎಂದು ಪಾಕಿಸ್ತಾನವೇ ಒಪ್ಪಿಕೊಂಡಿದೆ. ಇಂದು ಪ್ರಪಂಚದಾದ್ಯಂತ ಹೋಗಿ ಅವರು ಅಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಯಾಕೆ ಪಾಕಿಸ್ತಾನಕ್ಕೆ ಅನುಕೂಲ ಆಗುವ ರೀತಿ ಯಾಕೆ ಮಾತನಾಡುತ್ತಿದ್ದಾರೆ? ಅಕ್ರಮ ನುಸುಳುಕೋರರನ್ನು ತಡೆಯುವ ಕೆಲಸ ಆಗುತ್ತಿದೆ ಎಂದರು.
ಭಾರತ ಜಗತ್ತಿನ ನಾಲ್ಕನೇ ಅರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕಡು ಬಡತನ ಶೇ.21ರಿಂದ ಶೇ.5ಕ್ಕೆ ಇಳಿದಿದೆ. 26 ಕೋಟಿಯಷ್ಟು ಜನರು ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ. ಇದು ಸಮರ್ಥ ನಾಯಕತ್ವ ಮತ್ತು ಸ್ಥಿರ ಸರ್ಕಾರದ ಪರಿಣಾಮ ಎಂದು ಹೇಳಿದರು.
ಕೋವಿಡ್ ಭಾರತಕ್ಕೆ ಬಂದರೆ ಕೋಟಿ ಕೋಟಿ ಜನ ಸಾಯ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ನಾವು ಯಾವ ರೀತಿ ಎದುರಿಸಿದ್ದೇವೆ ಅನ್ನೋದನ್ನು ಇಡೀ ಜಗತ್ತು ನೋಡಿದೆ. ನಮ್ಮ 137 ಕೋಟಿ ಜನರಿಗೆ ವ್ಯಾಕ್ಸಿನ್ ಕೊಟ್ಟು ಬೇರೆ ದೇಶಗಳಿಗೂ ಕಳಿಸಿಕೊಟ್ಟಿದ್ದೇವೆ ಎಂದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…