ರಾಜ್ಯ

ಕಾಂಗ್ರೆಸ್‌ಗೆ ಮತ ಹಾಕುವವರನ್ನು ಗುರುತಿಸಿ ಬೇರೆಡೆಗೆ ಶಿಫ್ಟ್‌ ಮಾಡಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 300 ಮಂದಿ ಸಂಸದರು ದೆಹಲಿಗೆ ಹೋಗಿ ಸಮಯ ಕೇಳಿದ್ದಾರೆ, ಆಯೋಗ ಸ್ಪಂದಿಸುತ್ತಿಲ್ಲ. ನಾವು ಹಗರಣವನ್ನು ಹೊರ ತಂದ ಬಳಿಕ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಆಯೋಗ ಮುಂದಾಗಿದೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಮತಗಳ್ಳತನದ ಮಾಹಿತಿಯನ್ನು ಪೂರ್ಣವಾಗಿ ನಾವು ಬಹಿರಂಗ ಪಡಿಸಿದರೆ ಅಲ್ಲೋಲ್ಲ ಕಲ್ಲೋಲವಾಗಲಿದೆ. ಬಿಜೆಪಿ ಅ„ಕಾರದಲ್ಲಿದ್ದರೆ ಮತಗಳ್ಳತನವನ್ನು ಮುಚ್ಚಿ ಹಾಕುತ್ತಾರೆ. ಅದಕ್ಕಾಗಿ ಅವರು ರಾಜೀನಾಮೆ ಕೊಟ್ಟು ಚುನಾವಣೆ ಬರಲಿ ಎಂದು ಸವಾಲು ಹಾಕಿದರು.

ಒಂದು ಕ್ಷೇತ್ರದಲ್ಲಿ 2.40 ಲಕ್ಷ ಮತಗಳಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಅಲ್ಪಸಂಖ್ಯಾತರು, ದಲಿತರ ಮತಗಳನ್ನು ಪಕ್ಕದ ಕ್ಷೇತ್ರಕ್ಕೆ ಸ್ಥಳಾಂತರಿಸಿ ಅನ್ಯಾಯ ಮಾಡಲಾಗಿದೆ. ಚಿಲುಮೆ ಸಂಸ್ಥೆಯ ಹಗರಣವನ್ನು ಗಮನದಲ್ಲಿಟ್ಟುಕೊಂಡು ಚುನಾವಣಾಧಿಕಾರಿಗಳೇ ದೂರು ದಾಖಲಿಸಿದ್ದರು. ತನಿಖೆಯಾಗಿ ಕೆಲವರನ್ನು ಅಮಾನತುಗೊಳಿಸಲಾಗಿತ್ತು, ಕೆಲ ಸಮಯದ ನಂತರ ಕೆಲವರು ಕರ್ತವ್ಯಕ್ಕೆ ಮರಳಿದ್ದಾರೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

5 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago