ರಾಜ್ಯ

ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ : ಸಿ.ಎಂ ಸಿದ್ದರಾಮಯ್ಯ ಬೇಸರ

ಗದಗ : ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು.

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

3 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

3 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

3 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

3 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

3 hours ago