ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಟ ಅನಿರುದ್ಧ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಸಾನ್ಯ ಅಯ್ಯರ್, ನಟ ಶೈನ್ ಶೆಟ್ಟಿ ಭಾಗಿಯಾಗಿದ್ದರು. ಇಂದು ಬೆಳಿಗ್ಗೆ 6 ಗಂಟೆಯಿಂದ ಶುರುವಾದ ಯೋಗಾಭ್ಯಾಸ ಕಾರ್ಯಕ್ರಮವು 8.30ರವರೆಗೆ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಯೋಗ ಭಾರತದ ಸಂಸ್ಕೃತಿಯ ಪ್ರತೀಕ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರವು ಯೋಗ ದಿನವನ್ನು ಉತ್ತಮವಾಗಿ ಆಚರಣೆ ಮಾಡಿದೆ. ಯೋಗ ಜೀವನವನ್ನು ಪರಿಪೂರ್ಣ ಮಾಡುತ್ತದೆ. ಎಲ್ಲರೂ ಯೋಗ ಮಾಡಿ ನಿರೋಗಿ ಆಗಿ ಎಂದು ಸಲಹೆ ನೀಡಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…