ರಾಮನಗರ: ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಕೃಷ್ಣಮೂರ್ತಿ, ಶಿವಕುಮಾರ್, ಶಿವನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಜನವರಿ.3ರಂದು ಈ ಘಟನೆ ನಡೆದಿತ್ತು. ರೈತ ಶಿವನೇಗೌಡ ಎಂಬುವವರು ತಮ್ಮ ಹಸುವನ್ನು ಮೇಯಲು ಬಿಟ್ಟಿದ್ದಾಗ ಬಾಯಿಗೆ ನಾಡಬಾಂಬ್ ಸಿಲುಕಿ ಸ್ಫೋಟಗೊಂಡು ಹಸು ಬಾಯಿ ಛಿದ್ರವಾಗಿತ್ತು. ಎರಡು ದಿನಗಳ ಬಳಿಕ ಹಸು ಸಾವನ್ನಪ್ಪಿತ್ತು.
ಈ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಎರಡು ಜೀವಂತ ನಾಡಬಾಂಬ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…