Mysore
16
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಬಂಧಿತ ಮೂವರು ಶಂಕಿತ ಉಗ್ರರು 6 ದಿನ ಎನ್‌ಐಎ ಕಸ್ಟಡಿಗೆ

terror suspects arrested

ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಉಗ್ರ ಟಿ ನಾಸಿರ್‌ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್‌ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು ಬಂಧಿಸಿತ್ತು.

ಬಂಧಿತರನ್ನು ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿರುವ ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಅವರನ್ನು ಆರು ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ.ನಾಗರಾಜು, ಉತ್ತರ ವಿಭಾಗದ ನಗರ ಸಶಸ್ತ್ರ ಮೀಸಲು ಪಡೆ ಎಎಸ್‌ಐ ಚಾಂದ್‌ ಪಾಷಾ ಹಾಗೂ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್‌ ಅಹಮ್ಮದ್‌ ತಾಯಿ ಅನೀಸ್‌ ಫಾತಿಮಾ ಅವರನ್ನು ಬಂಧಿಸಲಾಗಿದೆ.

ಉಗ್ರ ಚಟುವಟಿಕೆಗೆ ಸಂಬಂಧಿಸಿದಂತೆ ಹಣ, ಚಿನ್ನಾಭರಣ ಎರಡು ವಾಕಿ ಟಾಕಿ ಸೇರಿದಂತೆ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.

Tags:
error: Content is protected !!