terror suspects arrested
ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಉಗ್ರ ಟಿ ನಾಸಿರ್‌ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್‌ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು ಬಂಧಿಸಿತ್ತು.
ಬಂಧಿತರನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅವರನ್ನು ಆರು ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ.ನಾಗರಾಜು, ಉತ್ತರ ವಿಭಾಗದ ನಗರ ಸಶಸ್ತ್ರ ಮೀಸಲು ಪಡೆ ಎಎಸ್‌ಐ ಚಾಂದ್ ಪಾಷಾ ಹಾಗೂ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮ್ಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ.
ಉಗ್ರ ಚಟುವಟಿಕೆಗೆ ಸಂಬಂಧಿಸಿದಂತೆ ಹಣ, ಚಿನ್ನಾಭರಣ ಎರಡು ವಾಕಿ ಟಾಕಿ ಸೇರಿದಂತೆ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…