ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ ಆದೇಶವಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಸರ್ಕಾರದ ಪರ ಎಂದು ತಿಳಿದುಕೊಳ್ಳುವ ಆಗತ್ಯವಿಲ್ಲ. ನಾವು ಅಧಿಕಾರದಲ್ಲಿದ್ದಾಗಲೂ 17 ಸೀಟ್‌ಗಳಲ್ಲಿ 13 ಗೆದ್ದಿದ್ದೆವು. ಕಾಂಗ್ರೆಸ್ ಪಕ್ಷದ ಶಾಸಕರೇ ರಾಜ್ಯದಲ್ಲಿ ಅಭಿವೃದ್ದಿ ಆಗುತ್ತಿಲ್ಲ ಎಂಬ ಹತಾಶೆಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.
ಯಾವುದೇ ಸಿದ್ದತೆ ಮಾಡಿಕೊಳ್ಳದೇ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳಿಂದ ಅಭಿವೃದ್ದಿ ಕೆಲಸಗಳಿಗೆ ಆರ್ಥಿಕ ತೊಂದರೆ ಉಂಟಾಗಿದೆ ಎಂದು ಅವರ ಪಕ್ಷದ ಶಾಸಕರೇ ನಮ್ಮ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದ್ದು, ಸಿಎಂ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ ಎಂದು ಕಿಡಿಕಾಡಿದರು.
ಗ್ರಾಮ ಪಂಚಾಯಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಬೇಕಿದೆ. ಹಾಗೆಯೇ ಸರ್ಕಾರದಲ್ಲಿ ಹಣವಿಲ್ಲದೆ ಗುತ್ತಿಗೆ ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೂ ಸಂಬಳ ನೀಡಿಲ್ಲ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಅಸಮಾಧಾನ ಹೊರಹಾಕಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…