Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮೂರು ಕ್ಷೇತ್ರಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಶಿವಮೊಗ್ಗ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೂರು ಉಪಚುನಾವಣೆ ಫಲಿತಾಂಶ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲುವು ಸಾಧಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಅನುಮಾನ ಇದ್ದರೆ ಫಲಿತಾಂಶ ಬರುವ ತನಕ ಕಾದು ನೋಡಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ ವಿರುದ್ಧ ಗರಂ ಆದರು. 40% ಕಮಿಷನ್‌ ಬಗ್ಗೆ ಲೋಕಾಯುಕ್ತರೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡೋದು ಸರಿಯಲ್ಲ. ಕಾಂಗ್ರೆಸ್‌ ನಾಯಕರು ಇನ್ನಾದರೂ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಲಹೆ ನೀಡಿದರು.

Tags:
error: Content is protected !!