ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ನಾಳೆಯಿಂದ ಮಳೆ ಬಿರುಸು ಪಡೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಹಾಸನದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.