ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಗೂ ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್.23ರವರೆಗೂ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.