ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.
ಇನ್ನು ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆಮಿಷ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಾನಪ್ಪಾಡಿ ಅವರು ಅವರದೇ ವಿಡಿಯೋದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.
ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ ಎಂದು ಸವಾಲು ಹಾಕಿದರು. ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಥವಾ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರುತ್ತೆ ತಾನೇ ಎಂದು ಪ್ರಶ್ನಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…