ಕಲಬುರ್ಗಿ: ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಕಲಬುರ್ಗಿಯ ಮೂವರು ಯುವಕರು ಭಾರತಕ್ಕೆ ವಾಪಸ್ ಆಗಿದ್ದಾರೆ.
ಈ ಮೂಲಕ ಕಲಬುರ್ಗಿಯ ಮೂವರು ಸೇರಿದಂತೆ 6 ಮಂದಿ ತವರಿಗೆ ಮರಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿ ವಾಪಸ್ ಆದ ಕೆಲವೇ ದಿನಗಳಲ್ಲಿ ಭಾರತದ ಯುವಕರು ದೇಶಕ್ಕೆ ಮರಳಿದ್ದಾರೆ.
ಮುಂಬೈ ಮೂಲದ ಏಜೆಂಟ್ ವೆಬ್‌ಸೈಟ್‌ನಲ್ಲಿ ಪರಿಚಯ ಮಾಡಿಕೊಂಡು ಯುವಕರನ್ನು ಉಕ್ರೇನ್‌ಗೆ ಕರೆಸಿಕೊಂಡಿದ್ದ.
ಕೆಲಸ ಕೊಡಿಸುವ ನೆಪದಲ್ಲಿ ಯುವಕರನ್ನು ಉಕ್ರೇನ್‌ಗೆ ಕರೆಸಿಕೊಳ್ಳಲಾಗಿದ್ದು, ಯುದ್ಧ ಭೂಮಿಯಲ್ಲಿ ಯುವಕರನ್ನು ಸೈನ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಸೈನ್ಯದಲ್ಲಿ ಬಂಕರ್‌ಗಳನ್ನು ಅಗೆಯುವ ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು.
ಯುವಕರನನು ಮರಳಿ ತರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಲಬುರ್ಗಿ ಯುವಕರನ್ನು ಉಕ್ರೇನ್‌ನಿಂದ ಭಾರತಕ್ಕೆ ವಾಪಸ್ ಕರೆಸುವಲ್ಲಿ ಯಶಸ್ವಿಯಾಗಿದ್ದಾರೆ.