Bengaluru-Mysore Expressway
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನ ಜಯಪುರ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.
ಮೂಲತಃ ಕೆ.ಆರ್.ನಗರದ ಚಿಕ್ಕನಾಯಕನಹಳ್ಳಿಯ ತಮಣ್ಣ ಗೌಡ (56), ಇವರ ಪುತ್ರ ಮುತ್ತುರಾಜ್ (28) ಹಾಗೂ ಹಾಸನ ಮೂಲದ ಚಾಲಕ ಸಚಿನ್ (27) ಮೃತಪಟ್ಟ ದುರ್ದೈವಿಗಳು.
ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದ ಇವರು ಮಡುವಿನಕುಡಿ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ತೆರಳಿ ಭಾನುವಾರ ಮುಂಜಾನೆ ಮೈಸೂರು ಕಡೆಯಿಂದ ಬೆಂಗಳೂರಿಗೆ ಸ್ವಿಫ್ಟ್ ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಮುಂಜಾನೆ 5 ಗಂಟೆ ಸಮಯದಲ್ಲಿ ಜಯಪುರ ಗೇಟ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…