Mysore
26
haze

Social Media

ಸೋಮವಾರ, 30 ಮಾರ್ಚ್ 2026
Light
Dark

ವರ ಮಹಾಲಕ್ಷ್ಮೀ ಹಬ್ಬವಾದ್ರೂ ಬರದ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ಠುಸ್‌

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೀಡಿದ್ದ ಭರವಸೆ ಈಗ ಠುಸ್‌ ಆಗಿದೆ.

ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ ಕಳೆದರೂ ಹಣ ಮಾತ್ರ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಕಳೆದ ಮೂರು ತಿಂಗಳಿನಿಂದ ಸ್ಟಾಪ್‌ ಆಗಿದ್ದು, ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲು ಸರ್ಕಾರದ ಬಳಿ ಹಣವಿಲ್ಲವೇ ಎಂದು ಕೆಲ ಮಹಿಳೆಯರು ಪ್ರಶ್ನೆ ಹಾಕುತ್ತಿದ್ದಾರೆ.

ವರಮಹಾಲಕ್ಷ್ಮೀ ಹಬ್ಬಕ್ಕಾದರೂ ಹಣ ಬರಬಹುದು ಎಂದು ಗೃಹಿಣಿಯರು ಕಾಯುತ್ತಾ ಕುಳಿತಿದ್ದರು. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ಕೂಡ ನೀಡಿದ್ದರು. ಆದರೆ ಗೃಹಲಕ್ಷ್ಮೀ ಹಣ ಮಾತ್ರ ಇನ್ನೂ ಬಂದಿಲ್ಲ. ಹಣ ಖಾತೆಗೆ ಜಮೆ ಆಗಿದೆಯಾ ಅಥವಾ ಇಲ್ಲವೇ ಎಂದು ಫಲಾನುಭವಿಗಳು ಬ್ಯಾಂಕ್‌ಗೆ ಅಲೆದು ಅಲೆದು ಸುಸ್ತಾಗಿದ್ದಾರೆ.

ಗೃಹಲಕ್ಷ್ಮೀ ಹಣವನ್ನೇ ನಂಬಿಕೊಂಡು ಕೆಲ ಮಹಿಳೆಯರು ಮನೆಗಳಿಗೆ ಕಂತಿನ ರೂಪದಲ್ಲಿ ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಬಾರದೇ ಇರುವುದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.

 

Tags:
error: Content is protected !!