ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ಭರವಸೆ ಈಗ ಠುಸ್ ಆಗಿದೆ.
ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ ಕಳೆದರೂ ಹಣ ಮಾತ್ರ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಕಳೆದ ಮೂರು ತಿಂಗಳಿನಿಂದ ಸ್ಟಾಪ್ ಆಗಿದ್ದು, ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲು ಸರ್ಕಾರದ ಬಳಿ ಹಣವಿಲ್ಲವೇ ಎಂದು ಕೆಲ ಮಹಿಳೆಯರು ಪ್ರಶ್ನೆ ಹಾಕುತ್ತಿದ್ದಾರೆ.
ವರಮಹಾಲಕ್ಷ್ಮೀ ಹಬ್ಬಕ್ಕಾದರೂ ಹಣ ಬರಬಹುದು ಎಂದು ಗೃಹಿಣಿಯರು ಕಾಯುತ್ತಾ ಕುಳಿತಿದ್ದರು. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಕೂಡ ನೀಡಿದ್ದರು. ಆದರೆ ಗೃಹಲಕ್ಷ್ಮೀ ಹಣ ಮಾತ್ರ ಇನ್ನೂ ಬಂದಿಲ್ಲ. ಹಣ ಖಾತೆಗೆ ಜಮೆ ಆಗಿದೆಯಾ ಅಥವಾ ಇಲ್ಲವೇ ಎಂದು ಫಲಾನುಭವಿಗಳು ಬ್ಯಾಂಕ್‌ಗೆ ಅಲೆದು ಅಲೆದು ಸುಸ್ತಾಗಿದ್ದಾರೆ.
ಗೃಹಲಕ್ಷ್ಮೀ ಹಣವನ್ನೇ ನಂಬಿಕೊಂಡು ಕೆಲ ಮಹಿಳೆಯರು ಮನೆಗಳಿಗೆ ಕಂತಿನ ರೂಪದಲ್ಲಿ ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಬಾರದೇ ಇರುವುದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…