ಬೆಂಗಳೂರು: ಇಂದಿನಿಂದ (ಜುಲೈ.1) ದೇಶಾದ್ಯಂತ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್ ಅಪರಾಧ ಕಾನೂನಗಳ ಅಡಿಯಲ್ಲಿ ಮೊದಲ ದಿನವೇ ರಾಜ್ಯದ ಹಲವು ಕಡೆಗಳಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 63 ಪ್ರಕರಣಗಳು ದಾಖಲಾಗಿವೆ.
ಸೋಮವಾರ ರಾತ್ರಿ 8 ವೇಳೆಗೆ ದಾಖಲಾಗಿರುವ ಪ್ರಕರಣಗಳ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಇದರ ಒಳಗೆ ಒಟ್ಟಾರೆಯಾಗಿ ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ 63 ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.





