ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ ಅವಘಡದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ನಟ ರಾಕಿಂಗ್ ಸ್ಟಾರ್ ಯಶ್ ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಯಶ್ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಗ್ರಾಮಕ್ಕೆ ಭೇಟಿ ನೀಡುವ ನಟ ಯಶ್, ಯುವಕರ ಕುಟುಂಬದರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಯಶ್ ಗ್ರಾಮಕ್ಕೆ ಬರಲೇಬೇಕು, ಗಾಯಾಳುಗಳನ್ನು ಹಾಗೂ ಮೃತ ಯುವಕರ ಕುಟುಂಬದವರನ್ನು ಯಶ್ ಭೇಟಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದರು.
ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…