Mysore
27
overcast clouds

Social Media

ಸೋಮವಾರ, 06 ಜುಲೈ 2026
Light
Dark

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.

ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್‌, ಚಾಲಕ ಆಕಾಶ್‌ ಎಂಬುವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಲಬುರ್ಗಿ-ಚಿಂಚೋಳಿ ಮಾರ್ಗದಲ್ಲಿ ರಾತ್ರಿ 7.30ಕ್ಕೆ ಕಲಬುರ್ಗಿಯಿಂದ ತೆರಳುತ್ತಿದ್ದ ಬಸ್‌ ಹೆಡ್‌ಲೈಟ್‌ ಇಲ್ಲದಿದ್ದರೂ ಕೂಡ ಮೊಬೈಲ್‌ ಟಾರ್ಚ್‌ನಲ್ಲಿ ಬಸ್‌ ಚಾಲನೆ ಮಾಡಲಾಗಿತ್ತು.

ಈ ಘಟನೆ ನಡೆದ ಬೆನ್ನಲ್ಲೇ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Tags:
error: Content is protected !!