ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.
ಡಿಸೆಂಬರ್ 18 ರಂದು ಚಾಮರಾಜ ಪೇಟೆಯಲಿ 64 ವರ್ಷದ ವೃದ್ಧರೊಬ್ಬರು ದೀರ್ಘಕಾಲಿನ ಅನಾರೋಗ್ಯದಿಂದ ಮೃತಪಟ್ಟಿದ್ದರು. ಜೊತೆಗೆ 44 ವರ್ಷದ ಹಾಗೂ 76 ವರ್ಷದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ರಾಜ್ಯದಲ್ಲಿ ನಿನ್ನೆಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ನಿನ್ನೆ 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ. ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ಕಂಡುಬಂದಿದೆ.
ಬಸ್ ಪ್ರಯಾಣಿಕರಿಗೆ ಮಾಸ್ಕ್ ಖಡ್ಡಾಯ: ರಾಜ್ಯದಲ್ಲಿ ಕೋವಿಡ್ ಭೀತಿಯ ಹಿನ್ನಲೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯಂತೆ ರಾಜ್ಯದ ಯಾವುದೇ ರಸ್ತೆ ಸಾರಿಗೆಯಲ್ಲಿ ಪ್ರಯಾಣ ಮಾಡುವವರು ಖಡ್ಡಾಯವಾಗಿ ಮಾಸ್ಕ ದರಿಸಬೇಕಾಗಿ ಎಂದು ತಿಳಿಸಿದೆ. ಈ ಬಗ್ಗೆ ತಿಳಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.