ರಾಜ್ಯ

ಕೋವಿಡ್‌ ಮಹಾಮಾರಿಗೆ ಮೂವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್‌ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.

ಡಿಸೆಂಬರ್‌ 18 ರಂದು ಚಾಮರಾಜ ಪೇಟೆಯಲಿ 64 ವರ್ಷದ ವೃದ್ಧರೊಬ್ಬರು ದೀರ್ಘಕಾಲಿನ ಅನಾರೋಗ್ಯದಿಂದ ಮೃತಪಟ್ಟಿದ್ದರು. ಜೊತೆಗೆ 44 ವರ್ಷದ ಹಾಗೂ 76 ವರ್ಷದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ರಾಜ್ಯದಲ್ಲಿ ನಿನ್ನೆಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ನಿನ್ನೆ 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ. ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ಕಂಡುಬಂದಿದೆ.

ಬಸ್‌ ಪ್ರಯಾಣಿಕರಿಗೆ ಮಾಸ್ಕ್‌ ಖಡ್ಡಾಯ: ರಾಜ್ಯದಲ್ಲಿ ಕೋವಿಡ್‌ ಭೀತಿಯ ಹಿನ್ನಲೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯಂತೆ ರಾಜ್ಯದ ಯಾವುದೇ ರಸ್ತೆ ಸಾರಿಗೆಯಲ್ಲಿ ಪ್ರಯಾಣ ಮಾಡುವವರು ಖಡ್ಡಾಯವಾಗಿ ಮಾಸ್ಕ ದರಿಸಬೇಕಾಗಿ ಎಂದು ತಿಳಿಸಿದೆ. ಈ ಬಗ್ಗೆ ತಿಳಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago