ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್‌ನಲ್ಲಿ ಸೋಮವಾರ ನಡೆದಿದೆ.
ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ ಏಳು ಯುವತಿಯರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ವೀಕ್ಷಣೆಗೆಂದು ವೈಜಿಗುಡ್ಡ ಜಲಾಶಯಕ್ಕೆ ಹೋಗಿದ್ದರು. ಈ ಪೈಕಿ ಓರ್ವ ಯುವತಿ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ದುರದೃಷ್ಟವಶಾತ್ ರಕ್ಷಣೆಗೆ ಧಾವಿಸಿದ ಇಬ್ಬರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.
ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.





