ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ.
ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ ಮೊಹಲ್ಲಾದ ಕೀರ್ತನಾ, ಮೈಸೂರು ಕುರುಬರಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಹಾಗೂ ಮೈಸೂರು ಕೆ.ಆರ್.ಮೊಹಲ್ಲಾ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು ಮೂಲದ ಯುವತಿಯರು ಟ್ರಿಪ್‌ಗೆಂದು ಮಂಗಳೂರಿಗೆ ಬಂದಿದ್ದರು. ರೆಸಾರ್ಟ್‌ನಲ್ಲಿ ಸ್ವಿಮ್ಮಿಂಗ್ ಫೂಲ್‌ಗೆ ಇಳಿದಾಗ ಈ ಘಟನೆ ನಡೆದಿದೆ.
ಘಟನೆಯ ವಿವರ: ಇಂದು ಬೆಳಿಗ್ಗೆ 10 ಗಂಟೆಯ ವೇಳೆಗೆ ನೀರಾಟವಾಡಲು ಯುವತಿಯರು ಕೊಳಕ್ಕೆ ಇಳಿದಿದ್ದರು. ಈಜುಕೊಳದ ನೀರಿನತ್ತ ಮೊಬೈಲ್ ಫೋನ್‌ನ ವಿಡಿಯೊ ಕ್ಯಾಮರಾ ಆನ್ ಮಾಡಿಟ್ಟು ಯುವತಿಯರು ಈಜಾಡುತ್ತಿದ್ದರು. ಆಳವಿರುವ ಕಡೆ ತೆರಳಿದ ವೇಳೆ ಈಜು ಬಾರದೇ ಮುಳುಗಿ ಮೃತಪಟ್ಟಿದ್ದಾರೆ.