ಬೆಂಗಳೂರು : ಬಹುಭಾಷ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆ ಕುರಿತಾಗಿ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಜೂನ್ 10ಕ್ಕೆ ಮುಂದೂಡಿದೆ.
ಈ ಮಧ್ಯೆ ಜೂನ್ 5 ರಂದು ಬಿಡುಗಡೆಯಾಗುವ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಸಿನಿಮಾ ನಿರ್ಮಾಪಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಕಮಲ್ ಅವರಿಗೆ ಕ್ಷಮೆ ಕೇಳುವುದಕ್ಕೆ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿತ್ತು.





