ಬೆಂಗಳೂರು: ಕರ್ನಾಟಕದಲ್ಲಿ ಥಗ್‌ಲೈಫ್ ಚಿತ್ರದ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಜೂನ್.20ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಥಗ್‌ಲೈಫ್ ಚಿತ್ರದ ವಿತರಣೆ ಹಾಗೂ ಬಿಡುಗಡೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಿ.ನಾರಾಯಣ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣದ ವಿಚಾರಣೆಯನ್ನು ಜೂನ್.20ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ಥಗ್‌ಲೈಫ್ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೂಡ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿದೆ.





