ಬೆಂಗಳೂರು : ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಮಲೆನಾಡು ಸೇರಿದಂತೆ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುತ್ತಿದೆ. ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ವ್ಯಾಪಕ ಹಾಗೂ ಭಾಗಶಃ ವ್ಯಾಪಕ ಮಳೆಯಾಗುವ ಲಕ್ಷಣಗಳಿವೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆ ರಾಜ್ಯದ 12 ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದ್ದರೆ, 19 ಜಿಲ್ಲೆಗಳಲ್ಲಿ ಅತ್ಯಲ್ಪ ಪ್ರಮಾಣದ ಮಳೆಯಾಗಿದೆ.
ಮೈಸೂರು, ಮಂಡ್ಯ, ಹಾಸನ, ಉಡುಪಿ, ಬೆಳಗಾವಿ, ತುಮಕೂರು, ಶಿವಮೊಗ್ಗ, ಕೊಡಗು, ಯಾದಗಿರಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.
ಏ.4ರಿಂದ ಏ.6ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…