ರಾಜ್ಯ

ಮುಂದಿನ 2 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ನ.6ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆ,ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:-ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್‌ ಸೂಚನೆ : ವಿರೋಧ ಪಕ್ಷ ನಾಯಕ ಅಶೋಕ್

ನ.7ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ಇನ್ನು ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನ.8ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ನ.9ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago