ಹಂಪಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದ ಪ್ರಮುಖ ಡ್ಯಾಂಗಳು ಭಾಗಶಃ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದ್ದು ಜಲಾಶಯಕ್ಕೆ ಹೆಚ್ಚಿನ ಒಳಹರಿವು ಆಗುತ್ತಿದ್ದು, ಜನರಿಗೆ ಕೃಷಿಗಾಗಿ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ಸೂಚಿಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಜು.18ಕ್ಕೆ ಜಲಾಶಯದಲ್ಲಿ 46,802 ಟಿಎಂಸಿ ನೀರು ಸಂಗ್ರಹವಾಗಿದೆ. ಹಾಗೂ ತುಂಗೆಗೆ 1,04,060 ಕ್ಯೂ. ಒಳಹರಿವು ನೀರು ಸೇರುತ್ತಿದ್ದು, ಹೀಗೆ ಮುಂದುವರಿದರೆ ವಾರದೊಳಗೆ ತುಂಗೆ ಭರ್ತಿಯಾಗಲಿದೆ. ಹೀಗಾಗಿ ಸಭೆ ನಡೆಸದೇ ಜನರ ಹಿತದೃಷ್ಠಿಯಿಂದ ಮುಂಗಡವಾಗಿ ನಾಲೆಗೆ ನೀರು ಹರಿಸಲು ಸೂಚನೆ ನೀಡಿರುವುದಾಗಿ ಸಚಿವ ತಂಗಡಗಿ ಹೇಳಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…