Mysore
21
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌: ಆರ್‌.ಅಶೋಕ

ಜೆಡಿಎಸ್‌ನದ್ದೇ ಕ್ಷೇತ್ರ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.

ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದರು.

Tags:
error: Content is protected !!