Minister Eshwar Khandre
ಬೆಂಗಳೂರು : ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಮೂರು ಮರಿಗಳ ರಕ್ಷಣೆಯೊಂದಿಗೆ ಸೆರೆ ಹಿಡಿಯಲಾಗಿರುವ ಈ ಹೆಣ್ಣು ಹುಲಿ ವಸತಿ ಪ್ರದೇಶಗಳಿಗೆ ಬಂದು ಹಲವು ಜಾನುವಾರಗಳ ಮೇಲೆ ದಾಳಿ ಮಾಡಿತ್ತು ಎಂಬುದನ್ನು ಖಚಿತಪಡಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಸಚಿವರು ವಿವರಿಸಿದರು.
ಇದನ್ನು ಓದಿ: ಚಾಮರಾಜನಗರ | ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ಸೆರೆ
ಪ್ರಸ್ತುತ ಸೆರೆ ಹಿಡಿಲಾದ ಹೆಣ್ಣು ಹುಲಿ ಮತ್ತು ರಕ್ಷಿಸಲಾದ ಮೂರು ಮರಿಗಳು ಪಶುವೈದ್ಯರ ನಿಗಾದಲ್ಲಿವೆ. ಕಾಡಿನ ಹೊರಗೆ ಸಂಚರಿಸುತ್ತಿರುವ ಹುಲಿಗಳ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇತ್ತೀಚೆಗೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವಸತಿ ಪ್ರದೇಶಗಳಲ್ಲಿ ಹುಲಿಗಳು ಕಾಣಿಸಿಕೊಂಡು ಜನ, ಜಾನುವಾರುಗಳ ಮೇಲೆ ಪದೇಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಂತಹ ಹುಲಿಗಳನ್ನು ಗುರುತಿಸಿ ಸೆರೆ ಹಿಡಿಯಲು ಆದೇಶ ನೀಡಲಾಗಿತ್ತು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…