ರಾಜ್ಯ

ಹುಲಿ ಸಾವು ರಾಜ್ಯಕ್ಕೆ ಕಪ್ಪು ಚುಕ್ಕೆ : ಎಚ್‌ಡಿಕೆ

ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ ಕಪ್ಪುಚುಕ್ಕೆ ಎಂದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಗಳು ಯಾವ ಕಾರಣಕ್ಕೆ ಸತ್ತಿವೆ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ವಿಸ್ತೃತ ತನಿಖೆ ಆಗಿ ಏನಾಗಿದೆ ಎನ್ನುವ ಮಾಹಿತಿ ಹೊರ ಬರಲಿ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಏನೇನು ನಡೆಯುತ್ತಿದೆಯೋ ಗೊತ್ತಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ. ಆದರೆ, ಕ್ರಾಂತಿ ಆಗುತ್ತೆ ಅಂತ ಮುಖ್ಯಮಂತ್ರಿಗಳ ಆಪ್ತರೇ ಹೇಳಿದ್ದಾರೆ. ಅದನ್ನಷ್ಟೇ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸಚಿವ ಕೆ.ಎನ್.ರಾಜಣ್ಣ ಅವರು ಸೆಪ್ಟೆಂಬರ್ ತಿಂಗಳಲ್ಲಿ ಬದಲಾವಣೆ ಆಗುತ್ತದೆ, ಕ್ರಾಂತಿ ನಡೆಯುತ್ತದೆ ಎಂದು ಹೇಳಿದ್ದಾರೆ. ಅದು ಕ್ರಾಂತಿಯೋ ಏನೋ ನನಗೆ ಗೊತ್ತಿಲ್ಲ. ಅದು ಏನು ಎಂಬುದನ್ನು ರಾಜಣ್ಣ ಅಥವಾ ಸಿಎಂ ಅವರೇ ಹೇಳಬೇಕು. ಅವರ ಪಕ್ಷದ ಬೆಳವಣಿಗೆ ಬಗ್ಗೆ ನನಗೆ ಹೇಗೆ ಗೊತ್ತಾಗಲಿದೆ? ಎಂದರು.

ಅಶೋಕ್ ಭೇಟಿ ಸೌಹಾರ್ದ ಭೇಟಿಯಷ್ಟೇ
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಭೇಟಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ದೆಹಲಿಯ ನನ್ನ ಮನೆಗೆ ಅಶೋಕ್ ಬಂದಿದ್ದರು. ನಾವು ಅವರು ಅಣ್ಣತಮ್ಮಂದಿರು. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ. ದೆಹಲಿಯಲ್ಲಿ ಹೊಸದಾಗಿ ಸರ್ಕಾರಿ ನಿವಾಸಕ್ಕೆ ನಾನು ಸ್ಥಳಾಂತರಗೊಂಡಿದ್ದೇನೆ. ಮೊದಲ ಬಾರಿಗೆ ಅವರು ಬಂದಿದ್ದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ವಿಷಯ ನನಗೇನೂ ಗೊತ್ತಿಲ್ಲ ಎಂದರು.

ಅಪ್ರತಿಮ ಆಡಳಿತಗಾರ ಕೆಂಪೇಗೌಡ
ನಾಡಪ್ರಭು ಕೆಂಪೇಗೌಡ ಬೆಂಗಳೂರಿನ ನಿರ್ಮಾತೃ ಮತ್ತು ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ ಎಂಬುದನ್ನು ಅನುಕ್ಷಣವೂ ಸ್ಮರಿಸೋಣ ಎಂದಿದ್ದಾರೆ ಅವರು.

ಅಭಿವೃದ್ಧಿ, ನೆಮ್ಮದಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ದೂರದೃಷ್ಟಿಯ ಹಾದಿ ನಮಗೆಲ್ಲರಿಗೂ ಮಾದರಿ, ಪ್ರೇರಣೆ. ವಿಜ್ಞಾನ, ತಂತ್ರಜ್ಞಾನ, ಅವಿಷ್ಕಾರ, ಕೈಗಾರಿಕೆ, ಉದ್ಯೋಗಾವಕಾಶ ಸೇರಿ ಅನೇಕ ರೀತಿಯಲ್ಲಿ ಜಗತ್ತಿನ ಮುಂಚೂಣಿ ನಗರವಾಗಿರುವ ಬೆಂಗಳೂರಿನ ಭವ್ಯ ಪರಂಪರೆಯನ್ನು ಮುಂದುವರಿಸೋಣ ಎಂದು ಸಚಿವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

11 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

11 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

12 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

12 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

12 hours ago