ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿವೆ.
ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಕೃಷ್ಣದೀಕ್ಷಿತ್‌ರಿದ್ದ ಪೀಠಕ್ಕೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದೆ. ಈ ವರದಿಯ ವಿಚಾರಣೆಯನ್ನು ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಶಿಫ್ಟ್‌ಗಳಲ್ಲಿ ಕೆಲಸ ಮಾಡುವುದರಿಂದ ದಟ್ಟಣೆ ಆಗುತ್ತಿಲ್ಲ, ಅವರ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…