Mysore
14
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತ: ಬಿ.ವೈ.ವಿಜಯೇಂದ್ರ

ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮೈಸೂರಿನಲ್ಲಿ ನೀಡಿದ ಹೇಳಿಕೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಹುಟ್ಟಾಕಿದೆ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಆಗದಿದ್ದರೆ ಸಾರ್ವಜನಿಕರ ಬಳಿ ಕ್ಷಮೆ ಕೇಳಲಿ. ಅದನ್ನು ಬಿಟ್ಟು ಬಿಪಿಎಲ್‌ ಕಾರ್ಡ್‌ದಾರರಿಗೆ ತೊಂದರೆ ಕೊಡಬಾರದು. ಅಲ್ಲದೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಹಲವು ಹಗರಣಗಳು ನಡೆದಿದ್ದು, ಪ್ರಮುಖವಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಾಗೂ ಅಬಕಾರಿ ಹಗರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಸರ್ಕಾರದ ದುರಾಡಳಿತದಿಂದ ಕಾಂಗ್ರೆಸ್‌ನಲ್ಲಿ ಶಾಸಕರೆಲ್ಲರೂ ದಂಗೆ ಹೇಳಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯನವರು ಕ್ಲೀನ್‌ಚಿಟ್‌ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಸಿದ್ದರಾಮಯ್ಯರವರ ಬಾಮೈದ ಮಲ್ಲಿಕಾರ್ಜುಸ್ವಾಮಿ ರಾತ್ರೋ ರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

 

Tags:
error: Content is protected !!