ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮೈಸೂರಿನಲ್ಲಿ ನೀಡಿದ ಹೇಳಿಕೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಹುಟ್ಟಾಕಿದೆ.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಆಗದಿದ್ದರೆ ಸಾರ್ವಜನಿಕರ ಬಳಿ ಕ್ಷಮೆ ಕೇಳಲಿ. ಅದನ್ನು ಬಿಟ್ಟು ಬಿಪಿಎಲ್ ಕಾರ್ಡ್‌ದಾರರಿಗೆ ತೊಂದರೆ ಕೊಡಬಾರದು. ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಲವು ಹಗರಣಗಳು ನಡೆದಿದ್ದು, ಪ್ರಮುಖವಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಾಗೂ ಅಬಕಾರಿ ಹಗರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಸರ್ಕಾರದ ದುರಾಡಳಿತದಿಂದ ಕಾಂಗ್ರೆಸ್‌ನಲ್ಲಿ ಶಾಸಕರೆಲ್ಲರೂ ದಂಗೆ ಹೇಳಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯನವರು ಕ್ಲೀನ್‌ಚಿಟ್ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಸಿದ್ದರಾಮಯ್ಯರವರ ಬಾಮೈದ ಮಲ್ಲಿಕಾರ್ಜುಸ್ವಾಮಿ ರಾತ್ರೋ ರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…