ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ನಿರಂತರವಾಗಿ ಹೋರಾಟ ನಡೆಸುತ್ತಿವೆ. ಮುಡಾ ಮತ್ತು
ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣಗಳ ಪಾರದರ್ಶಕ ತನಿಖೆಯ ದೃಷ್ಟಿಯಿಂದಾದರೂ ಸಿಎಂ ಹುದ್ದೆಗೆ ರಾಜೀನಾಮೆ ನೀಸಲೇಬೇಕು. ಅದನ್ನು ಬಿಟ್ಟು ಸಿದ್ದರಾಮಯ್ಯ ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಮೇಲೆ ಅರಾಜಕತೆ ಸೃಷ್ಟಿಯಾಗಿ ಅಭಿವೃದ್ಧಿ ಕಾರ್ಯಗಳೇ ಸ್ಥಗಿತವಾಗಿವೆ. ಇವೆಲ್ಲವಕ್ಕೂ ಮೂಲ ಕಾರಣ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಕಿಡಿಕಾರಿದರು.
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…