ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ. ಪಾರ್ಟಿ ಅವರನ್ನು ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದರು.
ಇನ್ನು ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ. ಸ್ಥಾನ ಬೇಕು ಎಂದು ಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡಾ ಇಲ್ಲ. ಬೇರೆ ಯಾವುದೇ ಚಿಂತನೆಗಳು ಇಲ್ಲ. ಹಕ್ಕು ಎನ್ನುವ ಪ್ರಶ್ನೆಯೂ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಶಿವರಾತ್ರಿ ಹಬ್ಬದಂದು ಅಮಿತ್ ಶಾ ಭೇಟಿಯ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದರು.
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…