ಶಿವಮೊಗ್ಗ: ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ತಿರಂಗಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬಿಜೆಪಿ ವತಿಯಿಂದ ನಾಳೆಯಿಂದ ರಾಜ್ಯಾದ್ಯಂತ ತಿರಂಗಯಾತ್ರೆ ನಡೆಯಲಿದೆ ಎಂದರು.
ಮೇ.15ರಂದು ಮಂಗಳೂರು, ಮೈಸೂರು ಸೇರಿದಂತೆ ಹಲವೆಡೆ ತಿರಂಗಯಾತ್ರೆ ನಡೆಯಲಿದೆ. ಮೇ.16ರಂದು ಶಿವಮೊಗ್ಗದಲ್ಲಿ ತಿರಂಗಯಾತ್ರೆ ನಡೆಯಲಿದೆ ಎಂದರು. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 8 ಪ್ರಮುಖ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಹೀಗಾಗಿ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.





