ರಾಜ್ಯ

ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ದೊಡ್ಡಬಳ್ಖಾಪುರ  :‌ ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ  ಪರ್ವೀಜ್‌ ಪಾಷ ಮೃತ ದುರ್ದೈವಿಯಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡಿಕೊಂಡಿದ್ದ ಪರ್ವೀಜ್‌ ಪಾಷ ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದುಕೊಂಡಿದ್ದ. ಇದೀಗ ಸಾಲಗಾರರ ಕಿರುಕುಳದಿಂದ ಬೇಸತ್ತು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ದೊಡ್ಡಬಳ್ಖಾಪುರ  ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

19 mins ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

21 mins ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

24 mins ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

26 mins ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

33 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

38 mins ago