Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

11 ದಿನಗಳ ಉಪವಾಸ ಕೈಗೊಂಡ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಕಾರಣ ಇಷ್ಟೆ

ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ.

ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ ಅವರು, ಇಂದಿನಿಂದ 11 ದಿನದ ಪ್ರಾಯಶ್ಚಿತ್ತ  ದೀಕ್ಷೆ ಕೈಗೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಪವನ್‌ ಕಲ್ಯಾಣ್‌ ಅವರು, ತಿರುಪತಿ ಲಡ್ಡು ಅಮೃತಕ್ಕೆ ಸಮಾನ. ಈಗ ತಿರುಪತಿ ಲಡ್ಡು ಪ್ರಸಾದ ಅಶುದ್ಧವಾಗಿದೆ. ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.

ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. ಇಂದಿನಿಂದ 11 ದಿನಗಳ ಕಾಲ ದೀಕ್ಷೆ ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

 

Tags:
error: Content is protected !!