ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ.
ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು, ಇಂದಿನಿಂದ 11 ದಿನದ ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಪವನ್ ಕಲ್ಯಾಣ್ ಅವರು, ತಿರುಪತಿ ಲಡ್ಡು ಅಮೃತಕ್ಕೆ ಸಮಾನ. ಈಗ ತಿರುಪತಿ ಲಡ್ಡು ಪ್ರಸಾದ ಅಶುದ್ಧವಾಗಿದೆ. ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.
ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. ಇಂದಿನಿಂದ 11 ದಿನಗಳ ಕಾಲ ದೀಕ್ಷೆ ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…