Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಎಸ್‌ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್‌ಗೆ ಪಿಐಎಲ್‌ ಅರ್ಜಿ

ಹೊಸದಿಲ್ಲಿ: ಆಂಧ್ರದ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಯ ಕೊಬ್ಬು ಬಳಕೆಯಾಗಿರುವ ಪ್ರಕರಣ ಕುರಿತು ಎಸ್‌ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಕೆಯಾಗಿದೆ.

ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ಮಾಡಿ ಲಡ್ಡು ಪ್ರಸಾದ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ರೈತ ಮತ್ತು ಹಿಂದೂ ಸೇನೆಯ ಅಧ್ಯಕ್ಷ ಸುರ್ಜಿತ್‌ ಸಿಂಗ್‌ ಯಾದವ್‌ ಅವರು, ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯಲ್ಲಿ ಹಿಂದೂ ಧರ್ಮವನ್ನು ಅಪಹಾಸ್ಯ ಮಾಡಿದ್ದಲ್ಲದೇ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

Tags:
error: Content is protected !!