ಹೈದರಾಬಾದ್: ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣದ ಕುರಿತು ಸಂಪ್ರೋಕ್ಷಣ ಕಾರ್ಯ ಭಾಗವಾಗಿ ಇಂದು ಶಾಂತಿ ಹೋಮವನ್ನು ತಿರುಪತಿ ತಿರುಮಲ ದೇವಸ್ಥಾನ ಏರ್ಪಡಿಸಿತ್ತು.
ಇಂದು ಆಂಧ್ರದ ತಿರುಪತಿ ದೇವಾಲಯದಲ್ಲಿ ಸಂಪ್ರೋಕ್ಷಣ ಶಾಂತಿ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು. ಹೋಮದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾರಾವ್, ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಅನೇಕ ಅರ್ಚಕರು ಭಾಗವಹಿಸಿದ್ದರು.
ದೇವಸ್ಥಾನದಲ್ಲಿ ನಾಲ್ಕು ಗಂಟೆಗಳ ಕಾಲ ಶಾಂತಿ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ.
ಆ ಆಚರಣೆಗಳಿಂದ ಕೆಟ್ಟದ್ದನ್ನು ನಿವಾರಿಸುತ್ತದೆ. ಸಾರ್ವಜನಿಕರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುತ್ತದೆ ಎಂದು ಟಿಟಿಡಿ ತಿಳಿಸಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…