Mysore
22
thunderstorm with light rain

Social Media

ಶನಿವಾರ, 05 ಅಕ್ಟೋಬರ್ 2024
Light
Dark

ತಿರುಪತಿ ಲಡ್ಡು ವಿವಾದ: ದಿಟ್ಟ ಹೆಜ್ಜೆ ಕೈಗೊಂಡ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ: ತಿರುಪತಿ ಲಡ್ಡು ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಈಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ದಿಟ್ಟ ಹೆಜ್ಜೆ ಕೈಗೊಂಡಿದ್ದಾರೆ.

ರಾಜ್ಯದಾದ್ಯಂತ ಡಾಬಾಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದಂತೆ ದೊಡ್ಡ ಆದೇಶ ಹೊರಡಿಸಿದ್ದು, ಡಾಬಾಗಳು, ರೆಸ್ಟೋರೆಂಟ್‌ಗಳ ಕೂಲಂಕುಷ ತನಿಖೆ ಹಾಗೂ ಪರಿಶೀಲನೆಗೆ ಸಿಎಂ ಆದಿತ್ಯನಾಥ್‌ ಖಡಕ್‌ ಸೂಚನೆ ನೀಡಿದ್ದಾರೆ.

ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು ಕಡ್ಡಾಯವಾಗಿದ್ದು, ಈ ಕ್ಯಾಮರಾಗಳ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿ. ಅಗತ್ಯವಿದ್ದಾಗ ಅಧಿಕಾರಿಗಳಿಗೆ ಲಭ್ಯವಾಗುವಂತೆ ಮಾಡುತ್ತದೆ. ಪಾರದರ್ಶಕತೆ ಮತ್ತು ದುಷ್ಕೃತ್ಯಗಳನ್ನು ತಡೆಯುತ್ತದೆ ಎಂದು ಹೇಳಿದ್ದಾರೆ.

ಈ ಮೂಲಕ ತಿರುಪತಿ ಲಡ್ಡು ವಿವಾದ ಭಾರೀ ತಾರಕಕ್ಕೇರಿರುವ ಬೆನ್ನಲ್ಲೇ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ದೇವಾಲಯದ ಎಲ್ಲಾ ಕಡೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

 

Tags: