ರಾಜ್ಯ

ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ: ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಹೆಸರು ಬದಲಾವಣೆಯ ಘೋಷಣೆ

ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ.

ಎಲೆಕ್ಟ್ರಾನಿಕ್‌ ಸಿಟಿಯ ಹೆಸರನ್ನ ಬದಲಿಸುವುದಾಗಿ ಇಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಂಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು. ಅಲ್ಲದೇ ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹಿಂದುಳಿದವರನ್ನು ತುಳಿಯಲು ಈಗಲೂ ಪ್ರಯತ್ನಗಳು ನಡೆಯುತ್ತಿವೆ. ನಾನು ಸಿಎಂ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

6 mins ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

33 mins ago

ಸರಗೂರಿನ ನೇರಳೆ ಗ್ರಾಮಕ್ಕೆ ನೇರ ಬಸ್‌ ಕಲ್ಪಿಸಿ : ಗ್ರಾಮಸ್ಥರ ಆಗ್ರಹ

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…

40 mins ago

ಉಡುಪಿಯಲ್ಲೊಂದು ಅಪರೂಪದ ಘಟನೆ : ಗ್ಯಾಸ್‌ ಓಟಿಪಿ ವ್ಯಕ್ತಿ ಜೀವ ಉಳಿಸಿದ್ದೇಗೆ?

ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…

1 hour ago

ಪತಿ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ

ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …

2 hours ago

ಇರಾನ್‌ಗೆ ತೆರಳಲಾಗದೆ ಕೊಡಗಿನಲ್ಲಿ ಸಿಲುಕಿದ ದಂಪತಿ

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…

3 hours ago