ರಾಜ್ಯ

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ.

ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಸಚಿವರ ಸೂಚನೆಯಂತೆ ತಂಬಾಕು ಉತ್ಪನ್ನಗಳ ಜಾಹೀರಾತನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಪಾಷ ತಿಳಿಸಿದ್ದಾರೆ.

ನಿಗಮದ ಬಸ್ಸುಗಳ ಮೇಲೆ ಅಡ್ವರ್ಟೈಸ್‌ಮೆಂಟ್ ಸ್ಟಾಂಡರ್ಡ್ ಕೌನ್ಸಿಲ್ ಆಫ್ ಇಂಡಿಯಾ ಕೋಡ್ ನಿಯಮಾವಳಿಗಳ ಅನ್ವಯ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶವಿದೆ. ನಿಗಮದ ವಾಹನಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತುಗಳ ಮೂಲಕ ನಿಗಮಕ್ಕೆ ಸಾರಿಗೇತರ ಆದಾಯ ಬರುತ್ತದೆ. ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಿಖಿತ ಮನವಿ ಪಡೆದು ಕರಾರಿನ ನಿಯಮಾವಳಿಯಂತೆ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಕೆಲವು ವ್ಯಕ್ತಿಗಳು ಬಸ್ಸುಗಳ ಮೇಲಿರುವ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸುತ್ತಿರುವುದು ಕಾನೂನು ಬಾಹಿರವಾಗಿದೆ. ಅಂತಹ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ ಎಫ್‌ಐಆರ್ ದಾಖಲಿಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿಗಮದ ಎಲ್ಲಾ ಹಿರಿಯ ವಿಭಾಗೀಯ ನಿಯಂತ್ರಣಾಽಕಾರಿಗಳಿಗೆ ನಿರ್ದೆಶನ ನೀಡಿದ್ದಾರೆ.

ಈ ಸಂಬಂಧ ಬಸ್ ನಿಲ್ದಾಣದ ಸಿಬ್ಬಂದಿಗಳು, ಚಾಲಕರು ಹಾಗೂ ಇತರೆ ಸಿಬ್ಬಂದಿಗಳಿಗೂ ಸೂಕ್ತ ತಿಳಿವಳಿಕೆ ನೀಡಲು ಅವರು ಸೂಚಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

9 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

14 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

18 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago