ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.
ಮಲೆನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…