Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಪಶ್ಚಿಮ ಬಂಗಾಳ ಬಂದ್‌

ಕೋಲ್ಕತ್ತಾ: ನಬಣ್ಣ ಅಭಿಜನ್‌ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್‌ಗೆ ಕರೆ ನೀಡಿದೆ.

ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿದ ನಿನ್ನೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ತೀವ್ರ ಘರ್ಷಣೆ ಕೂಡ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌, ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.

ಈ ನಿರಂಕುಶ ಆಡಳಿತವು ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ರಿಂ ಸಂಜೆ 6ರವರೆಗೆ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ಎಲ್ಲರೂ ಭಾಗವಹಿಸುವಂತೆ ಪಶ್ಚಿಮ ಬಂಗಾಳ ಜನತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್‌ ಮನವಿ ಮಾಡಿದ್ದಾರೆ.

Tags: