ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸೋಷಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅನುಭವಿ ರಾಜಕಾರಣಿ ಆಗಿರುವ ಅವರು ಸಕ್ರಿಯವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವರು ತುಂಬಾ ಕೊಡುಗೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆರೋಗ್ಯಕರ ಜೀವನ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಹ ಟ್ವೀಟ್ ಮಾಡಿದ್ದು, ನನ್ನ ಸುಪುತ್ರ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಪ್ರೀತಿ ಪೂರ್ವಕ ಶುಭಾಶಯಗಳು. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹರಸಿದ್ದಾರೆ.
ಇನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರು ಹಾಗೂ ಆತ್ಮೀಯರಾದ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…